ಮಂಗಳೂರು : ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕರು, ಈ ಹಿಂದೆ ಇಲ್ಲಿ ಭೇಟಿ ನೀಡಿದ್ದಾಗ ಸ್ಥಳೀಯರು ಈ ಕಾಮಗಾರಿಯ ಅಗತ್ಯತೆ ಬಗ್ಗೆ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಹೊಂದಿಸಿಕೊಂಡು ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು.

ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಬಿ ಶೆಟ್ಟಿ , ಹಿರಿಯ ಕಾರ್ಯಕರ್ತರಾದ ಪುಂಡಲೀಕ ಸುವರ್ಣ, ನಾರಾಯಣ ಶೆಟ್ಟಿ, ದೇವದಾಸ ಶೆಟ್ಟಿ, ರಾಜರತ್ನ ಸನಿಲ್, ವಾರ್ಡ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಗಣೇಶ್ ಕೊಟ್ಟಾರಿ, ಪ್ರಮೋದ್ ಕೊಟ್ಟಾರಿ, ದಿನೇಶ್ ಕುಲಾಲ್, ಸೋಮಶೇಖರ್, ಕಾರ್ಯದರ್ಶಿ ಲೋಕೇಶ್, ನಾರಾಯಣ ಕುಂದರ್ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ತರುಣ್, ಪ್ರೇಮಲತಾ ನಾಯ್ಕ, ಕಿಶನ್, ಮಧು ಕುಲಾಲ್, ಪ್ರವೀಣ್ ಪಟ್ನ, ರಾಜೀವ್ ಪೂಜಾರಿ, ರಮೇಶ್, ಬಬಿತ, ಹೊನ್ನಮ್ಮ, ಭಾಗಿ, ಉಷಾ, ಸುನೀತಾ, ಅಶ್ವಿನಿ, ಮಮತಾ ಮೊದಲಾದವರು ಉಪಸ್ಥಿತರಿದ್ದರು.




