ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.10 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.


ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಈ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕಿರಣ್ ರೈ, ಸುಕೇಶ್ ಅಳಪೆ ಸೇರಿದಂತೆ ಪಕ್ಷದ ಪ್ರಮುಖರು, ವಾರ್ಡಿನ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.




