ರಕ್ತದಾನ ಅತ್ಯಂತ ಪುಣ್ಯದ ಕಾರ್ಯ-ಡಾ.ದುರ್ಗಾ ಪ್ರಸಾದ್

Prakhara News
1 Min Read

ಮಂಗಳೂರು : ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದ್ದು , ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ ಎಂದು ಲೇಡಿಗೋಶನ್ ಅಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್ ಹೇಳಿದರು.


ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ವತಿಯಿಂದ ಲೇಡಿಗೋಶನ್ ಅಸ್ಪತೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಬಿರ ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ ‘ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ’ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ. ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕ ಗುರುದತ್ ಕಾಮತ್ , ಲೇಡಿಗೋಶನ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಜಗದೀಶ್, ಕೆಎಂಸಿ ಅಸ್ಪತ್ರೆಯ ಡಾ.ಅನುಪಮ ಸುರೇಶ್ ಮುಖ್ಯ ಅತಿಥಿಗಳಾಗಿದ್ದರು.
ಶುಶ್ರೂಷಕ ಅಧೀಕ್ಷಕಿ ತ್ರೇಸಿಯಮ್ಮ , ಸಹಾಯಕ ಆಡಳಿತಾಧಿಕಾರಿ ಅನಿತಾ ಸತ್ಯನ್, ಕಚೇರಿ ಅಧೀಕ್ಷಕ ಶಂಕರ್, ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು. ಶುಶ್ರೂಷಕ ಅಧಿಕಾರಿಗಳಾದ ಡಿನ್ಸಿಮೊನ್ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು, ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

Share This Article
Leave a Comment