ಸುರತ್ಕಲ್ : ಮುಕ್ಕ ಬಳಿ ದ್ವಿಚಕ್ರ ವಾಹನ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ನಡೆದಿದೆ.


ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ಭೀಮಾ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಳಿಕ ಮೃತದೇಹವನ್ನು ತ್ವರಿತವಾಗಿ ಸ್ಥಳಾಂತರಿಸುವ ಕಾರ್ಯದಲ್ಲಿ ಪೊಲೀಸ್ ಅಧಿಕಾರಿ ಕೃಷ್ಣ ಸಹಕರಿಸಿದರು.



