ಮಂಗಳೂರು : ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ ಸಂಚಾರ ಸುರಕ್ಷತೆ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹಿಸಿ ಜನಹಿತ ರಕ್ಷಣಾ ಸಮಿತಿ ನೆಕ್ಕಿಲ ಮಾಲೆಮಾರ್ ಕೊಟ್ಟಾರ ಚೌಕಿ ನೇತೃತ್ವದಲ್ಲಿ ಸ್ಥಳೀಯ ನಾಗರಿಕರು ಧರಣಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕುಮಾರ್ ಮಲೆಮಾರ್ ಮಾತನಾಡಿ, ಭ್ರಷ್ಟ ಅಧಿಕಾರಿಗಳಿಂದಾಗಿ ಇಷ್ಟು ಮಂದಿ ಬೀದಿಗಿಳಿಯಲು ಕಾರಣರಾಗಿದ್ದಾರೆ. ಕೇರಳದಲ್ಲಿ ಹೇಗೆ ಈ ಭ್ರಷ್ಟ ಅಧಿಕಾರಿಗಳನ್ನು ಹೊಡೆದು ಓಡಿಸುತ್ತಿದ್ದಾರೆ ಆದೇ ರೀತಿ ಕರ್ನಾಟಕದ ಜನತೆ ಕೂಡ ಮಾಡಬೇಕು, ಆಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರಾ ನೋಡಬೇಕೆಂದರು.

ಪ್ರದೇಶದ ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಈ ಭಾಗದ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಗಮನಕ್ಕೆ ನಿರಂತರವಾಗಿ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದರೂ, ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕೊರತೆ , ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣದಿಂದ ಯಾವುದೇ ಸಮಸ್ಯೆಗೂ ಇದುವರೆಗೂ ಶಾಶ್ವತ ಪರಿಹಾರ ದೊರಕಿಲ್ಲ. ಇದರಿಂದಾಗಿ ಇಂದು ಧರಣಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಯಿತು ಎಂದರು.

ಮಾಲೆಮಾರ್ ಚೌಕಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ, ಮಾಲೆಮಾರ್-ಕುಂಟಿಕಾನ ನಡುವಿನ ಸರ್ವಿಸ್ ರಸ್ತೆ ನಿರ್ಮಾಣ, ಕೊಟ್ಟಾರ ಚೌಕಿಯಿಂದ ಮಾಲಾಡಿ ರಸ್ತೆ ಕಡೆಗಿನ ತಿರುವನ್ನು ಸಂಚಾರಕ್ಕೆ ಅನುಕೂಲವಾಗುವಂತೆ ಸರಾಗಗೊಳಿಸುವುದು, ಕೊಟ್ಟಾರ ಚೌಕಿ ಜಂಕನ್‌ನಲ್ಲಿ ಫ್ರಡ್ ಲೈಟ್ ಆಳವಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟರು.
ದಿನೇದಿನೇ ವಾಹನ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ರಸ್ತೆ ವ್ಯವಸ್ಥೆ, ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಅಪಘಾತಗಳು ಹೆಚ್ಚಾಗುತ್ತಿದೆ. ಸಾರ್ವಜನಿಕರು ಜೀವಭಯದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಶಾಶ್ವತ ಪರಿಹಾರ ನೀಡಲು ಒತ್ತಾಯ.
ನಿಲ್ಲಿಸಿ ಸಂಚಾರಕ್ಕೆ ಅಡ್ಡಿ ಉಂಟುಮಾಡುವುದನ್ನು ತಡೆಯುವುದು ಹಾಗೂ ಮಳೆನೀರು ಹರಿಯುವ ಚರಂಡಿಗೆ ಡೈನೇಜ್ ನೀರು ಬಿಡುವುದನ್ನು ತಕ್ಷಣ ನಿಲ್ಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

