ಮಂಗಳೂರಿನಲ್ಲಿ “ದಕ್ಷಿಣಾ” ದ ಶುಭಾರಂಭ

Prakhara News
1 Min Read

ಮಂಗಳೂರು : ನಗರದ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ ‘ದಕ್ಷಿಣಾ‘ ದ ಶುಭಾರಂಭ ಮಂಗಳವಾರದಂದು ನೆರವೇರಿತು.

ಈ ನೂತನ ಘಟಕವು ಮಂಗಳೂರಿನ ಡೊಂಗರಕೇರಿಯಲ್ಲಿರುವ ‘ಪೂನಂ ಶ್ರೀ ಹರಿ ನಿಕೇತನ’ ಕಟ್ಟಡದಲ್ಲಿ ಕಾರ್ಯಾರಂಭಗೊಂಡಿದೆ. ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳನ್ನು ಒಂದೇ ಸೂರಿನಡಿ ಲಭ್ಯವಾಗಿಸುವ ಉದ್ದೇಶದಿಂದ ಈ ನೂತನ ಶಾಖೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾಲಕರಾದ ಸುಜಿತ್ ಪ್ರತಾಪ್ ತಿಳಿಸಿದರು.

ದೀಪ ಬೆಳಗಿಸಿ ಉದ್ಘಾಟನೆ:
ಪೊಳಲಿಯ ತಪೋವನ ಮತ್ತು ರಾಮಕೃಷ್ಣ ಮಠದ ಶ್ರೀ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ, ಮಂಗಳೂರು ರಾಮಕೃಷ್ಣಮಠದ ಸ್ವಾಮಿ ಲಕ್ಷ್ಮೀಶಾನಂದ ಸ್ವಾಮೀಜಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಗೂ ಮೋನಪ್ಪ ಭಂಡಾರಿ ಅವರು ದೀಪ ಬೆಳಗಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉದ್ಯಮಿ ಸುನಿಲ್ ಆಚಾರ್, ಹರೀಶ್ ಆಚಾರ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕವಿತಾ ಸನಿಲ್, ಯತೀಶ್ ಅರ್ವಾರ, ಸಂಜಯ್ ಪ್ರಭು, ನಂದನ್ ಮಲ್ಯ, ದಿಲರಾಜ್ ಆಳ್ವ, ರಂಜನ್ ಬೆಳ್ಳಾರ್ಪಾಡಿ ಸೇರಿದಂತೆ ಅನೇಕರು ಆಗಮಿಸಿ ಶುಭ ಹಾರೈಸಿದರು.

Share This Article
Leave a Comment