ಮಂಗಳೂರು : ಮೃತ ಫಲಾನುಭವಿಗಳ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್‌ಗೆ ಸೂಚನೆ..!

Prakhara News
1 Min Read

ಮಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ನಿಯಮಾನುಸಾರ ವಸೂಲಿ ಮಾಡಿ, ಸರ್ಕಾರಕ್ಕೆ ಶೇ.100ರಷ್ಟು ಮರುಜಮೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೃತ ಫಲಾನುಭವಿಗಳ ಖಾತೆಗಳಿಗೆ ಎಷ್ಟು ಹಣ ಜಮೆಯಾಗಿದೆ ಹಾಗೂ ಖಾತೆಯಿಂದ ಎಷ್ಟು ಮೊತ್ತವನ್ನು ಡ್ರಾ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಈ ಕುರಿತು ಪ್ರತಿ ತಾಲೂಕಿನಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಗ್ಯಾರಂಟಿ ಅಧ್ಯಕ್ಷರು ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳ ಜಂಟಿ ಸಭೆ ನಡೆಸಿ, ಹಣ ವಸೂಲಾತಿ ಹಾಗೂ ಸರ್ಕಾರಕ್ಕೆ ಮರುಜಮೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಅದೇ ರೀತಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಅಕ್ಕಿ ಚೀಲಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Share This Article
Leave a Comment