ಮಂಗಳೂರು: ಕರಾವಳಿ ಸರ್ಕಲ್ – ಪಂಪ್ವೆಲ್ ರಸ್ತೆ ಕಾಮಗಾರಿ ಪೂರ್ಣ, ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ರಿಂದ ಪರಿಶೀಲನೆ

Prakhara News
1 Min Read

ಮಂಗಳೂರು : ಮಂಗಳೂರು ನಗರದ ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ವರೆಗಿನ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ.

ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ₹4 ಕೋಟಿ ವೆಚ್ಚದಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇಂದು ವಿಧಾನ ಪರಿಷತ್‌ ಶಾಸಕ ಐವನ್‌ ಡಿ’ಸೋಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಕಿ ಉಳಿದಿರುವ ವಿದ್ಯುತ್‌ ದೀಪ ಹಾಗೂ ಇಂಟರ್‌ಲಾಕ್ ಕಾಮಗಾರಿಗಳನ್ನು ₹40 ಲಕ್ಷ ವೆಚ್ಚದಲ್ಲಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಾಗೆಯೇ, ಬಲ್ಮಠದಿಂದ ಕಂಕನಾಡಿ ಕರಾವಳಿ ಸರ್ಕಲ್‌ವರೆಗಿನ ರಸ್ತೆ ಅಭಿವೃದ್ಧಿಯನ್ನು ಮಹಾತ್ಮ ಗಾಂಧಿ ಯೋಜನೆಯಡಿ ₹1.21 ಕೋಟಿ ವೆಚ್ಚದಲ್ಲಿ ಕೆಲವೇ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳೂರು ನಗರದ 60 ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗಾಗಿ ಸುಮಾರು ₹400 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಟೆಂಡ‌ರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share This Article
Leave a Comment