ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಮಟ್ಟದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಯಶಸ್ವಿ

Prakhara News
1 Min Read

ಮಂಗಳೂರು: ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಜಿಲ್ಲೆ, ಕಾನೂನು ಪ್ರಕೋಷ್ಠದ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಅಭ್ಯಾಸ ವರ್ಗ – 2026 ರ ಸಮಾರೋಪ ಸಮಾರಂಭ ಜಗನ್ನಾಥ್ ರಾವ್ ಜೋಷಿ ಸೌಧ, ಜಿಲ್ಲಾ ಬಿಜೆಪಿ ಕಚೇರಿ, ಕೊಡಿಯಾಲ್ ಬೈಲ್ ನಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕರಾದ ಶ್ರೀ ಪ್ರಮೋದ್ ಪೂಜಾರಿ ಕೆರ್ವಾಶೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸ್ವಾಗತಿಸಿದರು.

ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ. ಪಾಲೆಮಾರ್ಅವರು ಮಾತನಾಡಿ, ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಪಕ್ಷಕ್ಕೆ ಹಾಗೂ ಸಮಾಜಕ್ಕೆ ಕಾನೂನುಬದ್ಧವಾಗಿ ಮಾರ್ಗದರ್ಶನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಅವರು ಮಾತನಾಡಿ, ಅಭ್ಯಾಸ ವರ್ಗದಿಂದ ಪಡೆದ ಜ್ಞಾನವನ್ನು ಸಂಘಟನೆಗಾಗಿ ಹಾಗೂ ಜನರ ಸೇವೆಗಾಗಿ ಬಳಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಮಾತನಾಡಿ, ಶಿಸ್ತು, ಸಮಯಪ್ರಜ್ಞೆ ಮತ್ತು ಕಾನೂನಿನ ಅರಿವು ಕಾರ್ಯಕರ್ತರಿಗೆ ಅತ್ಯಂತ ಅವಶ್ಯಕ ಎಂದು ತಿಳಿಸಿದರು.

ರಾಜ್ಯ ಕಾನೂನು ಪ್ರಕೋಷ್ಠದ ಸಂಚಾಲಕರಾದ ಶ್ರೀ ವಸಂತ್ ಕುಮಾರ್ ಅವರು ಮಾತನಾಡಿ, ರಾಜ್ಯಾದ್ಯಂತ ಕಾನೂನು ಪ್ರಕೋಷ್ಠವನ್ನು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಹೈಕೋರ್ಟ್ ವಕೀಲರು ಹಾಗೂ ಮಂಗಳೂರು S I R ನ ವಿಭಾಗ ಪ್ರಭಾರಿಗಳಾದ ಶ್ರೀ ಅಯ್ಯಪ್ಪ ಅವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರಿಗೆ ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಶ್ರೀ ಶ್ರೀಧರ್ ಶೆಟ್ಟಿ ಪುಳಿಂಚ ಅವರು ಸ್ಮರಣಿಕೆ ನೀಡಿ ಗೌರವಿಸಿದರು.ಜಿಲ್ಲಾ ಸಮಿತಿ ಸದಸ್ಯರಾದ ಶ್ರೀ ಪುರುಷೋತ್ತಮ್ ಭಟ್ ಅವರು ಧನ್ಯವಾದಗಳನ್ನು ಅರ್ಪಿಸಿದರು.

ಬಂಟ್ವಾಳ ಮಂಡಲ ಸಂಚಾಲಕರಾದ ಶ್ರೀ ವೀರೇಂದ್ರ ಎಂ. ಸಿದ್ದಕಟ್ಟೆ ಅವರು ಕಾರ್ಯಕ್ರಮದ ನಿರೂಪಣೆಯನ್ನು ಅಚ್ಚುಕಟ್ಟಾಗಿ ನೆರವೇರಿಸಿದರು.ಈ ಅಭ್ಯಾಸ ವರ್ಗದಲ್ಲಿ ಜಿಲ್ಲೆಯ ವಿವಿಧ ಮಂಡಲಗಳಿಂದ ವಕೀಲರು ಹಾಗೂ ಕಾನೂನು ಪ್ರಕೋಷ್ಠದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Share This Article
Leave a Comment