ಮಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳಾದ ಪೇಶ್ ಇಮಾಮ್ ಹಾಗೂ ಮುಅಝಿನ್ರಿಗೆ ಗೌರವಧನ ನೀಡುವ ಯೋಜನೆ ಜಾರಿಗೆ ತರಲಾಗಿತ್ತು.


ಆದರೆ, ಕಳೆದ ನಾಲ್ಕು ತಿಂಗಳಿಂದ ಗೌರವಧನ ಬಾಕಿ ಉಳಿದಿರುವುದರಿಂದ ಧಾರ್ಮಿಕ ಗುರುಗಳು ಆರ್ಥಿಕ ತೊಂದರೆ ಅನುಭವಿಸುವಂತಾಗಿದೆ.

ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬಾಕಿ ಇರುವ ನಾಲ್ಕು ತಿಂಗಳ ಗೌರವಧನವನ್ನು ಯಾವುದೇ ವಿಳಂಬವಿಲ್ಲದೆ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾದ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಆಗ್ರಹಿಸಿದ್ದಾರೆ.




