ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿ

Prakhara News
1 Min Read
Oplus_0

ಮಂಗಳೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ, ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ಸಮ್ಮೇಳನದಲ್ಲಿ ನವೆಂಬರ್ 29ರಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಹಾಗೂ ಬರವಣಿಗೆಯಲ್ಲಿ ಸಕ್ರಿಯರಾಗಿದ್ದು, ಈ ಅವಧಿಯಲ್ಲಿ 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳು ಮತ್ತು ಅಂಕಣ ಬರಹಗಳನ್ನು ಬರೆದಿದ್ದಾರೆ. ಇವರ ಬರಹಗಳು ಜಿಲ್ಲೆ, ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳು, ವಾರಪತ್ರಿಕೆಗಳು ಮತ್ತು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ವಿಶ್ಲೇಷಿಸುವ ವಿಮರ್ಶಾತ್ಮಕ ಲೇಖನಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಅಂಚನ್ ಅವರ ಸಾಧನೆಯನ್ನು ಪರಿಗಣಿಸಿ ಕರಾವಳಿ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.

Share This Article
Leave a Comment