ಮಂಗಳೂರು: ರಸ್ತೆ ಬದಿ ನಿಂತಿದ್ದ ಆಲ್ಟೋ ಕಾರಿಗೆ ಫಾರ್ಚೂನರ್ ಕಾರು ಡಿಕ್ಕಿ- ಕಾರಿನಲ್ಲಿದ್ದ ಯುವಕ ಮೃತ್ಯು..!

Prakhara News
0 Min Read

ಮಂಗಳೂರು: ನಗರದ ಉರ್ವ ಮಾರಿಗುಡಿ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೊ ಕಾರು ಚಾಲಕರೊಬ್ಬರು ಮೃತಪಟ್ಟಿದ್ದಾರೆ.

ಉರ್ವ ಗಾಂಧಿನಗರದ ಸರ್ಕಾರಿ ಶಾಲೆಯ ಬಳಿ ನಿಂತಿದ್ದ ಕಾರಿಗೆ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಆಲ್ಟೊ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Share This Article
Leave a Comment