ಜೋಕಟ್ಟೆಯಲ್ಲಿಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ: 22 ಕೆ.ಜಿ 250 ಗ್ರಾಂ ತೂಕದ ಗಾಂಜಾ ವಶ..!

Prakhara News
1 Min Read
Oplus_0

ಮಂಗಳೂರು : ಮಂಗಳೂರಲ್ಲಿ ಅಂತರ್ ರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಹೊರ ರಾಜ್ಯದಿಂದ ತಂದಿರುವ  ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಮಾಹಿತಿ ಪಡೆದ ಉತ್ತರ ಉಪ ವಿಭಾಗದ ಎಸಿಪಿ.ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳಾದ ಕರಣ್ ಬಾಬು ರಾಂ ಜಾಧವ್ , ಸಮೀರ್ ಶಾ, ಎಂ.ಹೆಚ್. ಮಯ್ಯದಿ, ಇಬ್ರಾಹಿಂ ಕಲೀಲ್ ಎಂಬವರನ್ನು ಬಂಧಿಸಿ ಇವರ ವಶದಲ್ಲಿದ್ದ 22 ಕೆ.ಜಿ 250 ಗ್ರಾಂ ಗಾಂಜಾ ಮತ್ತು 6 ಮೊಬೈಲ್ ಹಾಗೂ ಗಾಂಜಾ ಸಾಗಿಸಲು ಬಳಸಿದ ಎರಡು ಸ್ಕೂಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿತರ ಪೈಕಿ ಕರಣ್ ಬಾಬು ರಾಂ ಜಾದವ್ ಮತ್ತು ಸಮೀರ್ ಶಾ ಎಂಬವರು ಮಹಾರಾಷ್ಟ್ರದ ಮಯ್ಯದಿ ಹಾಗೂ ಮಧ್ಯಪ್ರದೇಶದ ಶಾರೂಕ್ ಎಂಬುವವರಿಂದ ಪಡೆದು ಉಡುಪಿ ಹೆಜಮಾಡಿ ಕೋಡಿಯ ಎಂ.ಹೆಚ್. ಮಯ್ಯದಿ ಮತ್ತು ಮಂಗಳೂರಿನ ಇಬ್ರಾಹಿಂ ಕಲೀಲ್ ರವರಿಗೆ ನೀಡುತ್ತಿದ್ದು, ಈ ಇಬ್ಬರು ಗಾಂಜಾವನ್ನು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು, ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಈ ಹಿಂದೆ ಕೂಡಾ ಹಲವು ಬಾರಿ ಗಾಂಜಾವನ್ನು ಅಕ್ರಮವಾಗಿ ತಂದು ಉಡುಪಿ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.

ಆರೋಪಿತರುಗಳಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಗಳ ಒಟ್ಟು ಮೌಲ್ಯ 12,30,500.ಆಗಿದೆ ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.21/2026 ಕಲಂ:8(C), 20(b),(ii)(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಮಾಡಲಾಗುತ್ತಿದೆ.

Share This Article
Leave a Comment