ಮಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಪ್ರಾರಂಭಿಸಬಹುದು ಮತ್ತು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬಹುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಸರ್ಕಾರದ ನಿರ್ಧಾರಕ್ಕೆ NSUI ವಿದ್ಯಾರ್ಥಿ ಸಂಘಟನೆಯಿಂದ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್ ನಲ್ಲಿ ಸಂಭ್ರಮಾಚರಿಸಿದರು.


NSUI ಸಂಭ್ರಮಾಚರಣೆ ಖಂಡಿಸಿ ABVP ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ಮಾಡಲಾಯಿತು. ಕಾಲೇಜಿಗೆ ನುಗ್ಗಿ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಕಾಲೇಜು ಪ್ರವೇಶ ದ್ವಾರದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. NSUI ಸಂಘಟನೆಗೆ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದರು. ಕಾಲೇಜು ಪ್ರವೇಶಕ್ಕೆ ಅನುಮತಿಸಿದ ಪ್ರಾಂಶುಪಾಲರಿಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.




