ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು..!

Prakhara News
1 Min Read
Oplus_0

ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಶರತ್.ಎಸ್ ಬಂಧಿತ ವ್ಯಕ್ತಿ.

ದಿನಾಂಕ 24 ರಂದು ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ  ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿಎಸ್ ಐ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ.ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ.ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ

Share This Article
Leave a Comment