ಮಂಗಳೂರು: ಆರೀಫ್ ನ ಬರ್ಬರ ಹತ್ಯೆ- ಬುಡೋಳಿಯಲ್ಲಿ ಪತ್ತೆಯಾಯ್ತು ಹಂತಕರು ಬಳಸಿದ್ದ ಕಾರು!

Prakhara News
1 Min Read

ಮಂಗಳೂರು: ಫ್ಲೈಓವರ್ ಮೇಲೆ ಇಂದು ಮಾರ್ಚ್ 27ರಂದು ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ನಡುವೆ ಬಂಟ್ವಾಳದ ಬುಡೋಳಿಯಲ್ಲಿ ಸಂಶಯಾಸ್ಪದ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ಹೋಗಿ, ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪ್ರಸ್ತುತ ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪತ್ತೆಯಾದ ಕಾರಿನ ಆಧಾರದ ಮೇಲೆ ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಟ್ಲ ಪೊಲೀಸರು ವಶಪಡಿಸಿಕೊಂಡ ಕಾರನ್ನು ಮುಂದಿನ ತನಿಖೆಗಾಗಿ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.

Share This Article
Leave a Comment