ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀಕೃಷ್ಣ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪುಣ್ಯ ಪರ್ವದ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶೇಷ ಪೂಜಾ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.


ಶ್ರೀ ಕ್ಷೇತ್ರದಲ್ಲಿ ಜನ್ಮಾಷ್ಟಮಿ ಅಂಗವಾಗಿ ಭಜನಾ ಸಂಕೀರ್ತನೆ, ಶ್ರೀಕೃಷ್ಣ ದೇವರಿಗೆ ವಿಶೇಷ ಅಭಿಷೇಕ, ಆಕರ್ಷಕ ಪುಷ್ಪಾಲಂಕಾರ ಸೇವೆ, ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿದವು. ತಡರಾತ್ರಿ ಭಕ್ತರು ಭಕ್ತಿಯಿಂದ ಅರ್ಘ್ಯ ಪ್ರದಾನ ಮಾಡಿದರು. ತದನಂತರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಸದಸ್ಯೆ ಪಿ.ಕೆ. ಗೌರವಿ ರಾಜಶೇಖರ್, ಕದ್ರಿ ಶ್ರೀ ಮಂಜುನಾಥ ದೇವಳದ ಟ್ರಸ್ಟಿ ರಾಜೇಂದ್ರ ಚಿಲಿಂಬಿ ಹಾಗೂ ಗೋಕರ್ಣನಾಥ ಸೇವಾದಳದ ಸದಸ್ಯರು ಮತ್ತು ನೂರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾದರು.


