ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಬೆಳುವಾಯಿ ಹೋಮಲ್ಕೆ ಎಂಬಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


ನವಮಿ ಕುಡ್ವರ ಮನೆ ಬಳಿ ಈ ಅಪಘಾತ ನಡೆದಿದೆ. ಅತಿ ವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಟೋ ರಿಕ್ಷಾ ಚಾಲಕರು ಕೂಡಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
