ಪ್ರೇಮ ವೈಫಲ್ಯ ಒಮಾನ್ ನಲ್ಲಿ ಆತ್ಮಹತೆಗೆ ಶರಣಾದ ಉಳ್ಳಾಲದ ಯುವಕ…!!

Prakhara News
1 Min Read

ಉಳ್ಳಾಲ: ಒಮನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಉಳ್ಳಾಲದ ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತಪಟ್ಟ ದುರ್ದೈವಿ.

ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮಾನ್‌ನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚಿಗೆ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಮರಳಿದ್ದರು. ಇದೀಗ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೀತಿ ನಿರಾಕರಣೆ: ಪುನೀತ್ ಮಂಗಳೂರಿನ ಉರ್ವಾ ಮೂಲದಯುವತಿಯನ್ನು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.ಎನ್ನಲಾಗಿದ್ದು ಇತ್ತೀಚಿನ ದಿನಗಳಲ್ಲಿ ಯುವತಿಯು ಪುನೀತ್ ಅವರ ಕರೆ ಹಾಗೂ ಸಂದೇಶಗಳಿಗೆ ಸ್ಪಂದಿಸದೆ ಪ್ರೀತಿಯನ್ನು ನಿರಾಕರಿಸಿದ್ದರು ಎನ್ನಲಾಗಿದೆ.

ಲೈವ್ ವಿಡಿಯೋ: ಪ್ರೀತಿ ನಿರಾಕರಣೆಯಿಂದ ಮನನೊಂದಿದ್ದ ಪುನೀತ್‌ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ, ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹ ತರಲು ವಿಳಂಬ ಸಾಧ್ಯತೆ:ಮಧ್ಯಪ್ರಾಚ್ಯದಲ್ಲಿ ಸದ್ಯ ಇರುವ ಅಶಾಂತ ಪರಿಸ್ಥಿತಿಯಿಂದಾಗಿ ಒಮಾನ್‌ನ ಕಾನೂನು ಪ್ರಕ್ರಿಯೆಗಳಿಗೆ ಹೆಚ್ಚಿನ ಸಮಯ ತಗುಲುವ ಸಾಧ್ಯತೆಯಿದ್ದು. ಈ ಕಾರಣದಿಂದ ಮೃತದೇಹವನ್ನು ಭಾರತಕ್ಕೆ ತರಲು ವಿಳಂಬವಾಗಬಹುದು ಎಂದು ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

Share This Article
Leave a Comment