ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಗುಜರಾತ್ ನ ಬಾವಾ ನಗರ್ ಜಿಲ್ಲೆಯ ಮಕವನ್ ವಿಕ್ರಂ (25),ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ (21) ಚಟ್ಟೋಪಾಧ್ಯಾಯ,ಜಾರ್ಖಾಂಡ್ ನ ಪುಪ್ಲ ಶಿವ ಕುಮಾರ್ ರಾವ್ (32) ಉತ್ತರ ಪ್ರದೇಶದ ಗೌರವ್ ಪಾಂಡೆ (24) ಉತ್ತರ ಪ್ರದೇಶದ ಹರ್ಷ್ ಮಿಸ್ರಾ (22) ಜಾರ್ಖಾಂಡ್ ನ ರಾಜೇಶ್ ಮಂಡನ್ (30) ಉತ್ತರ ಪ್ರದೇಶದ ಮೊಹಮ್ಮದ್ ಆಕೀಬ್ ಅಲಿ (27) ಬಿಹಾರದ ರಾಜೀವ್ ರಂಜನ್ ಕುಮಾರ್,ಜಾರ್ಖಾಂಡ್ ನ ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ನೌಶಾದ್ ಅಲಿ (34) ರಾಜಸ್ಥಾನದ ಓಂ ಪ್ರಕಾಶ್ ಯಾಧವ್ (37) ಎಂದು ತಿಳಿದುಬಂದಿದೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಪೋಲಿಸರು ದಸ್ತಗಿರಿ ಮಾಡಿದ್ದಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದೆ.ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿದ್ದು. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಸಿಗಬೇಕಾಗಿದೆ.
ಈ ಆರೋಪಿಗಳು ಹೂಡಿಕೆದಾರರನ್ನು ಆಕರ್ಷಿಸುವ ವಿಧಾನಅನುಸರಿಸುತ್ತಿದ್ದು ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು 60 ಲಕ್ಷದಿಂದ 01 ಕೋಟಿಯವರೆಗೆ Investment fraud ಗೆ ಜರನ್ನು ಒಳಪಡಿಸುತ್ತಿದ್ದಾರೆಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು. ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿದೆ.
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.ವಂಚಕರಿಂದ 1 ಲ್ಯಾಪ್ ಟಾಪ್ ,21 ಮೊಬೈಲ್ ಪೋನ್ ಗಳು ,20ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು ಹಾಗೂ 20 ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

