ಇಂದಿನಿಂದಲೇ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧ..!

Prakhara News
1 Min Read

ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧಿಸುವ ವಿಚಾರದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತೀರ್ಮಾನ ಕೈಗೊಳ್ಳುತ್ತವೆ. ಪರಿಸರ ಸ್ವಚ್ಛ ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ವಿಚಾರವಾಗಿ ಗುರುವಾರವಷ್ಟೇ ಕಲಾಪದಲ್ಲಿ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇಗುಲಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿಗೊಳಿಸಲಾಗಿದ್ದು, ಒಂದು ವೇಳೆ ಇದನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ದಂಡ ವಿಧಿಸುವಂತೆ ದೇವಾಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪರಿಷತ್ತಿನಲ್ಲಿ ಹೇಳಿದ್ದರು.

Share This Article
Leave a Comment