ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ.


79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು.
ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಕಳೆದ 8 ವರ್ಷಗಳಲ್ಲಿ ನಾವು ಜಿಎಸ್‌ಟಿ ಮೂಲಕ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿದ್ದೇವೆ. ಎಂಟು ವರ್ಷಗಳ ಬಳಿಕ, ನಾವು ಅದನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಅದನ್ನು ನಾವು ಪರಿಶೀಲಿಸಿದ್ದೇವೆ. ರಾಜ್ಯಗಳೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.
