ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅದ್ದು ಪಡೀಲ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು..!

Prakhara News
1 Min Read

ಮಂಗಳೂರು: ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.23ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅದ್ದು ಪಡೀಲ್ ಎಂದು ಗುರುತಿಸಲಾಗಿದೆ. ಕಾರ್ಯಕ್ರಮ ಮುಗಿದ ಬಳಿಕ ಬಾಲಕಿಯನ್ನು ಮನೆಗೆ ಬಿಡುವ ಸಲುವಾಗಿ ಆರೋಪಿ ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. 46/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 75 ಹಾಗೂ ಫೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment