ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಸಮೀಪದ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.


ಮೃತ ವಿದ್ಯಾರ್ಥಿಯನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದೆ.

ಮೇ 21ರಂದು ಸಂಜೆ ಸುಮಾರು 5:20ರ ವೇಳೆಗೆ ವಿವೇಕಾನಂದ ಫಾರ್ಮಾಸಿಟಿಕಲ್ ಕಾಲೇಜಿನ ದ್ವಿತೀಯ ವರ್ಷದ ಫಾರ್ಮಸಿ ವಿಭಾಗದ ನಾಲ್ವರು ವಿದ್ಯಾರ್ಥಿಗಳು ಕುಮಾರಧಾರ ನದಿಗೆ ಈಜಲು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳಾದ ಗದಗ ಮೂಲದ ಕಿರಣ್, ಸ್ಥಳೀಯ ಉಪ್ಪಿನಂಗಡಿಯ ಹರ್ಷಿತ್, ಮೈಸೂರು ಮೂಲದ ತೇಜಸ್ ಹಾಗೂ ಸಚಿನ್ ನದಿಯಲ್ಲಿ ಈಜುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ.ಈ ವೇಳೆ ಕಿರಣ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಉಳಿದ ಮೂವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



