ಪುತ್ತೂರು: ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್ ನೇಮಕ

Prakhara News
1 Min Read

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಕ್ಷೇತ್ರದ ವಕ್ತಾರರಾಗಿ ರಾಜೇಶ್ ಬನ್ನೂರು ಹಾಗೂ ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್‌ ಪರ್ಲಡ್ಕ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ-ಸಿದ್ಧಾಂತಗಳು, ಸಂಘಟನೆಯ ಚಟುವಟಿಕೆಗಳು ಹಾಗೂ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಕ್ತಾರರಾಗಿ ರಾಜೇಶ್ ಬನ್ನೂರು ಅವರು ಪಕ್ಷದ ಅಧಿಕೃತ ನಿಲುವುಗಳನ್ನು ಸಾರ್ವಜನಿಕ ವೇದಿಕೆಗಳು ಮತ್ತು ಮಾಧ್ಯಮಗಳ ಮುಂದೆ ಮಂಡಿಸಲಿದ್ದು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್ ಪರ್ಲಡ್ಕ ಅವರು ಪತ್ರಿಕಾ ಸಮನ್ವಯ ಹಾಗೂ ಮಾಹಿತಿ ಪ್ರಸಾರದ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ನೂತನ ಪದಾಧಿಕಾರಿಗಳ ನೇಮಕವನ್ನು ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದ್ದು, ಇದರಿಂದ ಸಂಘಟನೆಗೆ ಮತ್ತಷ್ಟು ಬಲ ದೊರೆಯಲಿದೆ
ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article
Leave a Comment