ಸುಳ್ಯದಲ್ಲಿ ವಿವಾಹಿತೆ ನಿಗೂಢ ಸಾವು ಪ್ರಕರಣ – ಫಾತಿಮತ್‌ ನಿಶಾನ ಮನೆಗೆ ಮಾಜಿ ಶಾಸಕ ಬಿಜೆಪಿ ಮುಖಂಡ ಸಂಜೀವ ಮಠಂದೂರು ಭೇಟಿ

Prakhara News
1 Min Read

ಪುತ್ತೂರು : ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್‌ ನಿಶಾನ ಅವರ ನಿವಾಸಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ನಿಶಾನ ಅವರ ಸಾವಿನ ಕುರಿತು ಕುಟುಂಬಸ್ಥರಿಂದ ಮಾಹಿತಿ ಪಡೆದ ಸಂಜೀವ ಮಠಂದೂರು, ಸ್ಥಳದಲ್ಲೇ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾತುಕತೆ ನಡೆಸಿದರು. “ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ನಿಶಾನ ಸಾವಿಗೆ ಕಾರಣರಾದವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Share This Article
Leave a Comment