ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ – ಪ್ರಮುಖ ಆರೋಪಿಗೆ ಹೈ ಕೋರ್ಟ್ ಜಾಮೀನು ಮಂಜೂರು..!

Prakhara News
1 Min Read

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

2023ರ ನ.6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರಿನ ಮಂಜುನಾಥ್ ಶೆಣೈ ಯಾನೆ ಹರಿ ಹಾಗೂ ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ ಆರೋಪಿ ಕೇಶವ ಅವರಿಗೆ ಪುತ್ತೂರಿನ ನ್ಯಾಯಾಲಯ ಈ ಹಿಂದೆ ಷರತ್ತುಬದ್ಧ ಜಾಮೀನು ನೀಡಿತ್ತು. ಇತ್ತೀಚೆಗೆ ಎರಡನೇ ಆರೋಪಿ ಮನೀಷ್‌ಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರಥಮ ಆರೋಪಿ ಚೇತನ್‌ಗೂ ಜಾಮೀನು ದೊರೆತಿದೆ.

Share This Article
Leave a Comment