ಮಂಗಳೂರು : ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 10.129 ಕೆ.ಜಿ. ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.


ಮಾರ್ಚ್ 23ರಂದು ಬೆಳಿಗ್ಗೆ ಸುಮಾರು 11.56 ಗಂಟೆಗೆ ಚೆನ್ನೈ ಸೆಂಟ್ರಲ್–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12601) ರೈಲು ಮಂಗಳೂರು ಕೇಂದ್ರ ರೈಲು ನಿಲ್ದಾಣದ ಪ್ಲ್ಯಾಟ್ ಫಾರಂ 1ಕ್ಕೆ ಆಗಮಿಸಿದ ವೇಳೆ ಸಾಮಾನ್ಯ ಬೋಗಿಯಲ್ಲಿ ಪರಿಶೀಲನೆ ನಡೆಸಿದ ಆರ್ಪಿಎಫ್ ಇನ್ಸ್ಪೆಕ್ಟರ್ ಶ್ರೀ ಮನೋಜ್ ಕುಮಾರ್ ಯಾದವ್ ಹಾಗೂ ಸಿಬ್ಬಂದಿ ಅನುಮಾನಾಸ್ಪದವಾಗಿ ಬಿದ್ದಿದ್ದ ಗಾಂಜಾವನ್ನು ಪತ್ತೆಹಚ್ಚಿದರು.

ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹5,06,450 ಆಗಿದ್ದು, ಮಾಲೀಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಮುಂದಿನ ಕ್ರಮಕ್ಕಾಗಿ ಅದನ್ನು ಮಂಗಳೂರು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.



