ಬಂಟ್ವಾಳ : ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ : ಮೂವರು RPF ವಶಕ್ಕೆ.

Prakhara News
1 Min Read

ಬಂಟ್ವಾಳ : ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಗಲಾಟೆ ನಡೆಸಿ ಒಬ್ಬ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದ ಘಟನೆ ಸೋಮವಾರ ನಡೆದಿದೆ.

ಮಾಹಿತಿಯ ಪ್ರಕಾರ, ಆರೋಪಿಗಳು ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದರು. ಪ್ರಯಾಣದ ವೇಳೆ ಕೊನೆಯ ಬೋಗಿಯಲ್ಲಿ ಗಲಾಟೆ ನಡೆಸಿ ಸಹಪ್ರಯಾಣಿಕನ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ಪಡೆದ RPF ಸಿಬ್ಬಂದಿ ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲನ್ನು ಕೆಲ ನಿಮಿಷಗಳ ಕಾಲ ತಡೆದು ಪರಿಶೀಲನೆ ನಡೆಸಿದರು. ಬಳಿಕ ರೈಲಿನೊಳಗೆ ತೆರಳಿದ ಸಿಬ್ಬಂದಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು.

ಘಟನೆಯಿಂದ ಕೆಲಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ RPF ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಕೊಳ್ಳಲಾಯಿತು.

Share This Article
Leave a Comment