ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.
ಆರೋಪಿಗಳು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, 15 ಗ್ರಾಂ ಎಂಡಿಎಂಎ , ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
