ಮೂಡುಬಿದಿರೆ: ಯುವತಿಗೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್-ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು

Prakhara News
1 Min Read

ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ ಆಕೆಯ ಮೇಲೆ ನಿರಂತರ ಲೈಂಗಿಕ‌ ದೌರ್ಜನ್ಯವೆಸಗಿ ಫೊಟೊ ಇರುವುದಾಗಿ ಬೆದರಿಸುತ್ತಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.

ಸಂತ್ರಸ್ತೆಯ ಸಹೋದರನಿಗೆ 2 ವರ್ಷದ ಹಿಂದೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ ಪರಿಸ್ಥಿತಿ ಮತ್ತು ಮನೆಯ ಪರಿಸ್ಥಿತಿಯನ್ನು ಆಸ್ಪತ್ರೆಗೆ ಬಂದಿದ್ದ ಓರ್ವ ವ್ಯಕ್ತಿ ಗಮನಿಸಿ ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರವರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುವ ಧರೆಗುಡ್ಡೆಯ ಸಮಿತ್ ರಾಜ್ ರವರ ಮೊಬೈಲ್ ನಂಬರ್ ಅನ್ನು ಕೊಟ್ಟು ಮಾತನಾಡಲು ಹೇಳಿದ್ದರು. ಅದರಂತೆ ಸಂತ್ರಸ್ತೆ ಆತನಿಗೆ ಫೋನ್ ಮಾಡಿ ಕಷ್ಟವನ್ನು ಹೇಳಿಕೊಂಡಿದ್ದಳು. ಬಳಿಕ ಮೂಡಬಿದ್ರೆ ಶಾಸಕರು ಆಸ್ಪತ್ರೆಗೆ ಬಂದು ಸಹಾಯ ಮಾಡಿದ್ದರು ಎಂದು‌ ತಿಳಿದು ಬಂದಿದೆ.

ಆ ಬಳಿಕ ಆರೋಪಿ ಸಮಿತ್ ರಾಜ್ ಪದೇ ಪದೇ ಸಂತ್ರಸ್ತೆಯ ಮೊಬೈಲ್ ಫೋನ್ ಗೆ ಕರೆ ಮಾಡಿ ಒಳ್ಳೆಯ ರೀತಿಯಲ್ಲಿ ಮಾತನಾಡಿ ನಂತರ ಯುವತಿಯನ್ನು ಪ್ರೀತಿ ಮಾಡುತ್ತಿದ್ದು ಮದುವೆಯಾಗುವುದಾಗಿ ಹೇಳಿದ್ದ. ಇದರಿಂದ ಹೆದರಿದ ಯುವತಿ ಮನೆಯಲ್ಲಿ ಮಾತನಾಡುವಂತೆ ತಿಳಿಸಿದ್ದಳು ಎಂದು ಹೇಳಲಾಗಿದೆ.

ಈ ಕುರಿತು ಆರೋಪಿ ಸಮಿತ್ ರಾಜ್ ನೊಂದಿಗೆ ಮಾತನಾಡಿದ್ದ ಆಕೆಯ ತಾಯಿ ಸಣ್ಣ ವಯಸ್ಸಿಗೆ ಮದುವೆ ಮಾಡಿಸುವುದಿಲ್ಲ‌ ಎಂದು ಹೇಳಿದ್ದರು ಎನ್ನಲಾಗಿದೆ.

Share This Article
Leave a Comment