ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

Prakhara News
1 Min Read

ಬೆಂಗಳೂರು :ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

ಜಾಂಡೀಸ್‌ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಅವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

Share This Article
Leave a Comment