ಮಂಗಳೂರು: ಫೆಬ್ರವರಿ 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಈ ಕುರಿತು ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.


ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಕೇಂದ್ರ ಸಹಕಾರಿಬ್ಯಾಂಕ್ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮಾ ಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿ ದ್ದೇವೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿ ದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗ ದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77 ಮಂದಿಗೆ ಸವಲತ್ತುಗಳ ವಿತರಣೆ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅಭಿವಂದನಾ ಭಾಷಣ ಮಾಡಲಿದ್ದಾರೆ, ಶಾಸಕ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ ,ಶಶಿಕುಮಾರ್ ರೈ ಬಾಲ್ಯೊಟ್ಟು , ಎಸ್.ಬಿ.ಜಯರಾಮ್ ರೈ , ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು,ವಾದಿರಾಜ ಶೆಟ್ಟಿ, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.


