ಮಂಗಳೂರು:  ಡ್ರಗ್ಸ್ ಮಾರಾಟ 6 ಮಂದಿಯ ಬಂಧನ, 22 ಲಕ್ಷ ಮೌಲ್ಯದ ಮಾದಕ ವಸ್ತು ವಶ

Prakhara News
2 Min Read

ಮುಂಬೈನಿ0ದ ಮಂಗಳೂರಿಗೆ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಚಿರಾಗ್ ಸನಿಲ್, ಆಲ್ವಿನ್ ಕ್ಲಿಂಟನ್ ಡಿ ಸೋಜಾ, ಜನನ್ , ರಾಜೇಶ್ ಬಂಗೇರ, ವರುಣ್ ಗಾಣಿಗ ಮತ್ತು ಕೇರಳದ ಅಬ್ದುಲ್ ಕರೀಂ ಇ.ಕೆ ಎಂದು ಗುರುತಿಸಲಾಗಿದೆ.  ಬಂಧಿತರಿ0ದ ರೂ. 22,30,000 ಮೌಲ್ಯದ 111.83 ಗ್ರಾಂ ಎಂಡಿಎ0ಎ ಮತ್ತು ರೂ. 1,90.000 ಮೌಲ್ಯದ 21.03 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ.

ಮಂಗಳೂರು ನಗರದ ಸಿಸಿಬಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಮಾಹಿತಿ ಮೇರೆಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇ ಔಟ್ ಎಂಬಲ್ಲಿ ಸೆ. 21 ರಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.  ಸ್ಕೂಟರ್ ನಲ್ಲಿ ಇಬ್ಬರು ಯುವಕರು ಎಂಡಿಎ0ಎ ಮಾದಕ ವಸ್ತುವಿನೊಂದಿಗೆ ಪತ್ತೆಯಾಗಿದ್ದು, ಪರಾರಿಯಾಗಲು ಪ್ರಯತ್ನಿಸಿದ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಾವೂರಿನ ವಾಸಿಗಳಾದ ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿ ಸೋಜಾ ಎಂದು ತಿಳಿದುಬಂದಿದ್ದು, ಅವರಿಂದ ರೂ. 22,30,000 ಮೌಲ್ಯದ 111.83 ಗ್ರಾಂ ಎಂಡಿಎ0ಎ ಅನ್ನು ವಶಪಡಿಸಲಾಯಿತು.

ಈ ಬಗ್ಗೆ ಮಾದಕ ವಸ್ತು ದೊರೆತ ಮೂಲದ ಬಗ್ಗೆ ವಿಚಾರಿಸಿದ್ದು, ಕೇರಳದ ಅಬ್ದುಲ್ ಕರೀಂ ಎಂಬಾತನು ನೀಡಿದ ಹಣದಿಂದ ಮುಂಬೈಯಲ್ಲಿ ವಾಸವಿರುವ ಆಫ್ರಿಕನ್ ಪ್ರಜೆ ಬೆಂಜಮಿನ್ ಎಂಬಾತನಿ0ದ ಆರೋಪಿ ಚಿರಾಗ್ ಸನಿಲ್ ಖರೀದಿ ಮಾಡಿ ತಂದಿರುವ ಬಗ್ಗೆ ತಿಳಿದು ಬಂದಿದೆ.. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಮಾದಕ ವಸ್ತು ಖರೀದಿಸಲು ಹಣವನ್ನು ನೀಡಿದ ಅಬ್ದುಲ್ ಕರೀಂ ಇ.ಕೆ ಎಂಬಾತನನ್ನು ಮಂಗಳೂರು ಕೇಂದ್ರ ರೇಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಲಾಯಿತು.  

ಆರೋಪಿಗಳನ್ನು ಕೂಲಂಕುಷವಾಗಿ ವಿಚಾರಿಸಿದಾಗ ತಮ್ಮ ಬಳಿ ಇದ್ದ ಕೊಕೇನ್ ಮಾದಕ ವಸ್ತುಗಳನ್ನು ಈಗಾಗಲೇ ಮೂರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಸಿಸಿಬಿ ಘಟಕದ ಪೊಲೀಸರು ಮಣ್ಣಗುಡ್ಡೆಯ ಸೆಂಟ್ರಲ್ ವೇರ್ ಹೌಸ್ ಬಳಿ ಮೂರು ಸ್ಕೂಟರ್ಗಳಲ್ಲಿ ನಿಂತುಕೊ0ಡಿದ್ದವರ ಮೇಲೆ ದಾಳಿ ಮಾಡಿದ್ದಾರೆ.

ಈ ವೇಳೆ  ಅವರಿಂದ ಸುಮಾರು 1,90.000 ಮೌಲ್ಯದ 21.03 ಗ್ರಾಂ ಕೊಕೇನ್ ಅನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

Share This Article
Leave a Comment