ಶಿವಮೊಗ್ಗ ; ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಎಂಬಾತ ಕಿಂಡಲೆ ಮಾಡುತ್ತಿದ್ದ ಹಿನ್ನೆಲೆ ಡೇತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಸಂಚಾರಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಮಹಮ್ಮದ್ ಜಕ್ರೀಯಾ (55) ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ ಎಂದು ತಿಳಿದುಬಂದಿದೆ. ಶಿವಮೊಗ್ಗ ಖಾಸಗಿ ಬಸ್ ಸ್ಟ್ಯಾಂಡ್ ಬಳಿ ಇರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಒಂದು ತಿಂಗಳು ರಜೆಯಲ್ಲಿದ್ದು ಎರಡು ದಿನದ ಹಿಂದೆ ಮಹಮ್ಮದ್ ಜಕ್ರೀಯಾ ರವರು ಡ್ಯೂಟಿಗೆ ಬಂದಿದ್ದರು.ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

