ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ನಡೆದಿದೆ.



ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಬಟ್ಟೆ-ಬರೆ ವಸ್ತುಗಳು ಎಲ್ಲವೂ ಸುಟ್ಟು ಭಸ್ಮವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿ ಬೆಂಕಿ ಕಾಣಿಸಿದ ಕೂಡಲೇ ಪಕ್ಕದ ಮನೆಯವರ ಗಮನಕ್ಕೆ ಬಂದಿದ್ದು, ಕೂಡಲೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ


