ಕಾಸರಗೋಡು: ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು..!!

Prakhara News
1 Min Read

ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ.

ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ ಚಾಕನ್ನು ಕುತ್ತಿಗೆಯಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇರ್ತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರಿಂದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ.

Share This Article
Leave a Comment