ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.


ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸ್ ದಾಖಲಾಗಿದೆ.
ಈ ಹಿಂದೆ ಮಟ್ಟಣ್ಣನವರ್ ಮಾಧ್ಯಮಗಳ ಎದುರು ಮಾತನಾಡುವ ವೇಳೆ ಮದನ್ ಬುಗುಡಿಯನ್ನ ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು. ಇದು ಸುಳ್ಳು ಎಂದು ಆರೋಪಿಸಿ ಪ್ರವೀಣ್ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ 204, 319(2), 353(2) ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
