ಉಡುಪಿ: ಖಾಸಗಿ ಬಸ್ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ವೈರಲ್ ಆಗಿರುವ ವಿಡಿಯೋ ಉಡುಪಿ ಜಿಲ್ಲೆಯ ಹರಿಕಂಡಿಗೆ–ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನದ್ದು ಎನ್ನಲಾಗಿದೆ. ಬಸ್ನಲ್ಲಿ ಅತಿಯಾದ ಜನಸಂದಣಿ ಇದ್ದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿಗಳು ಏಣಿಯಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.

ವಿದ್ಯಾರ್ಥಿಗಳ ಈ ಅಪಾಯಕಾರಿ ಪ್ರಯಾಣದ ಕುರಿತು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.




