ಉಡುಪಿ: ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ ಯುವಕ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ನಡೆದಿದೆ.
14 ಚಕ್ರದ ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೇರ್ಪಟ್ಟು ಚಕ್ರದಡಿ ಸಿಲುಕಿಕೊಂಡಿರುವ ರಣ ಭೀಕರ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಮೃತ ಯುವಕ ಬ್ರಹ್ಮಾವರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ದೌಡಾಯಿಸಿ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಸಾಗಿಸಲಾಯಿತು



