ಉಡುಪಿ: ಪಾನ್ ಸ್ಟಾಲ್ ನಲ್ಲಿ ಗಾಂಜಾ ಮಾರಾಟ; ಆರೋಪಿಯ ಬಂಧನ

Prakhara News
0 Min Read

ಉಡುಪಿ: ಪಾನ್ ಸ್ಟಾಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಾಪು ತಾಲೂಕಿನ ಬಡಾ ಗ್ರಾಮದ ಎರ್ಮಾಳುವಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಅನಿಲ್ ಎಂದು ತಿಳಿದು ಬಂದಿದೆ.
ಕಾಪು ತಾಲೂಕಿನ ಬಡಾ ಗ್ರಾಮದ ಎರ್ಮಾಳುವಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿಯಂತೆ ಅನಿಲಾ ಪಾನ್ ಸ್ಟಾಲ್ ಹೆಸರಿನ ಅಂಗಡಿಗೆ ದಾಳಿ ನಡೆಸಿದ ಪೊಲೀಸರು 625.83 ಗ್ರಾಂ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಅನಿಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

Share This Article
Leave a Comment