ಕಡಲ ನಗರಿ ಉಳ್ಳಾಲದಲ್ಲಿ ಫೆಬ್ರವರಿ 14ರಂದು ವೀರರಾಣಿ ಅಬ್ಬಕ್ಕ ಉತ್ಸವ : ಮಾಜಿ ಶಾಸಕ ಜಯರಾಂ ಶೆಟ್ಟಿ

Prakhara News
1 Min Read
Oplus_0

ಮಂಗಳೂರು : ಪರಕೀಯ ಪೋರ್ಚುಗೀಸರ ವಿರುದ್ಧ ಹೋರಾಡಿ ಈ ರಾಷ್ಟ್ರಕ್ಕಾಗಿ ಪ್ರಾಣಾರ್ಪಣೆ ಮಾಡಿದ ಪ್ರಪ್ರಥಮ ಸ್ವಾತಂತ್ರ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕಳ ಸಾಧನೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ವೀರರಾಣಿ ಅಬ್ಬಕ್ಕ ಉತ್ಸವವವನ್ನು ಕಳೆದ ಹಲವು ವರ್ಷಗಳಿಂದ ಆಚರಿಸುತ್ತಾ ಬಂದಿದ್ದು.ಈ ಬಾರಿ ಫೆಬ್ರವರಿ 14ರಂದು ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿಂದ ವೀರರಾಣಿ ಅಬ್ಬಕ್ಕ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ. ಇನ್ನು ಪ್ರತೀ ವರ್ಷದಂತೆ ಈ 2025-26ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಯನ್ನು ಸಾಹಿತ್ಯಕ್ಕೆ ಕೊಡುಗೆ ನೀಡಿದ ಡಾ. ಸಾಯಿಗೀತಾ ಹಾಗೂ ಕಲೆಗೆ ನೀಡಿದ ಕೊಡುಗೆಗಾಗಿ ವಿದುಷಿ ರಾಜಶ್ರೀ ಉಳ್ಳಾಲ್ ಅವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ರತ್ನಾವತಿ ಬೈಕಾಡಿ ಮತ್ತಿತ್ತರರು ಉಪಸ್ಥಿತರಿದ್ದರು.

Share This Article
Leave a Comment