ಉತ್ತರ ಪ್ರದೇಶದ ಜಲಾಲಾಬಾದ್ ಈಗ ಪರಶುರಾಮಪುರಿ; ಹೆಸರು ಬದಲಾವಣೆಗೆ ಯೋಗಿ ಸರ್ಕಾರ ಒಪ್ಪಿಗೆ

Prakhara News
1 Min Read

ಲಕ್ನೋ: ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ರಾಜ್ಯದ ಹಲವಾರು ನಗರಗಳ ಹೆಸರನ್ನು ಬದಲಾಯಿಸಲಾಗಿದೆ. ಐತಿಹಾಸಿಕ ನಗರಗಳಲ್ಲಿ ಒಂದಾದ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಅನ್ನು ಪರಶುರಾಮಪುರಿ ಎಂದು ಮರುನಾಮಕರಣ ಮಾಡಲಾಗಿದೆ.

ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಪಟ್ಟಣದ ಹೆಸರನ್ನು ಪರಶುರಾಮಪುರಿ ಎಂದು ಬದಲಾಯಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಯಿತು. ನಗರದ ಹೆಸರನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿತ್ತು.

ರಾಜ್ಯದ ಹಲವು ವರ್ಷಗಳ ಪ್ರಯತ್ನದ ನಂತರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು ಹೆಸರು ಬದಲಾವಣೆಗೆ ಅನುಮೋದನೆ ನೀಡಿತು. ಮೊದಲು ಜಲಾಲಾಬಾದ್‌ಗೆ ಮೊಘಲ್‌ ಚಕ್ರವರ್ತಿ ಜಲಾಲುದ್ದೀನ್ ಮುಹಮ್ಮದ್ ಅಕ್ಬರ್ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಹಿಂದೂ ಪುರಾಣ ಮತ್ತು ಧರ್ಮಗ್ರಂಥಗಳಲ್ಲಿ ವಿಷ್ಣುವಿನ ಅವತಾರವಾದ ಪರಶುರಾಮನ ಜನ್ಮಸ್ಥಳ ಎಂಬ ಆಧಾರದ ಮೇಲೆ ಈ ಹೆಸರು ಬದಲಾವಣೆ ಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಹಲವಾರು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ಬದಲಾಯಿಸಲಾಗಿದೆ. 2018 ರಲ್ಲಿ ಅಲಹಾಬಾದ್ ಅನ್ನು ಪ್ರಯಾಗ್‌ರಾಜ್ ಎಂದು. ಮುಸ್ತಾಬಾದ್ ಅನ್ನು ಕಬೀರ್ ಧಾಮ್ ಎಂದು ಮರುನಾಮಕರಣ ಮಾಡಲಾಯಿತು.

Share This Article
Leave a Comment