ಉಪ್ಪಿನಂಗಡಿ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸಾವನಪ್ಪಿದ ಘಟನೆ ಕಲ್ಲೇರಿ ಎಂಬಲ್ಲಿ ಸಂಭವಿಸಿದೆ.


ಮೃತರನ್ನು ಐದು ವರ್ಷ ಪ್ರಾಯದ ಸುಹೈರಾ ಎಂದು ಗುರುತಿಸಲಾಗಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಹೈರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಾಲಕಿಯ ತಾಯಿ ಸಾಜಿರಾ (33) , ದ್ವಿಚಕ್ರ ವಾಹನ ಸವಾರ ಬಾಲಕಿಯ ಅಜ್ಜ ಇಸ್ಮಾಯಿಲ್ (60) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



