ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಸುಮಾರು ಎರಡು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.


ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ.ಸಿ.ಆರ್. ಸಂಖ್ಯೆ 01/18ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪಿಸಿ-2295 ಪ್ರವೀಣ್ ಹಾಗೂ ಪಿಸಿ ಲಿಂಗರಾಜು ಅವರು ಅ.6ರಂದು ಹಾಸನದಲ್ಲಿ ವಿಶ್ವನನ್ನು ಪತ್ತೆಹಚ್ಚಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


