ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚಲಿಸುತ್ತಿದ್ದ BMW ಕಾರಿನಲ್ಲಿ ಬೆಂಕಿ ಆಕಸ್ಮಿಕ ; ನಾಲ್ವರು ಪ್ರಯಾಣಿಕರು ಪವಾಡಸದೃಶ ಪಾರು!

Prakhara News
1 Min Read

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಲಗಳ ಪ್ರಕಾರ, ಈ ಐಷಾರಾಮಿ ಕಾರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಉಪ್ಪಿನಂಗಡಿ ದಾಟಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ತಲುಪಿದಾಗ ಕಾರಿನ ಮುಂಭಾಗದ ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕಾರಿನ ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ತಕ್ಷಣವೇ ಗಮನಿಸಿದ ಚಾಲಕ, ತಡಮಾಡದೆ ಕಾರನ್ನು ಹೆದ್ದಾರಿಯ ಬದಿಗೆ ನಿಲ್ಲಿಸಿದ್ದಾರೆ. ಕಾರು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕುವ ಮುನ್ನವೇ ಒಳಗಿದ್ದ ನಾಲ್ವರೂ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಅವರು ಕೆಳಗಿಳಿಯುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ವ್ಯಾಪಿಸಿದ್ದು, ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿದೆ.

Share This Article
Leave a Comment