ಬೆಳ್ತಂಗಡಿ: ವೇಣೂರಿನಲ್ಲಿ ಯುವತಿಗೆ ಕಿರುಕುಳ ಆರೋಪ – 61 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ..!

Prakhara News
1 Min Read
Oplus_0

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಆರೋಪಿ ಕಿರುಕುಳ ನೀಡಿದ ಆರೋಪ ಮೇಲೆ 61 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ .​

ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಅ.24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ , ಹಣದ ಆಮಿಷವೊಡ್ಡಿ ಕಿರುಕುಳ ನೀಡಿದ್ದಾನೆ ಎಂದು ​ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ, ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment