ಭೀಮಾತೀರದಲ್ಲಿ ಮತ್ತೆ ಹರಿದ ರಕ್ತದ ಕೋಡಿ: ಒಂದೇ ಕುಟುಂಬದ 6 ಜನರ ಬರ್ಬರ ಕೊಲೆ

Prakhara News
1 Min Read

ವಿಜಯಪುರ : ದೀರ್ಘಕಾಲದ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯು ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.

ಈ ಘಟನೆಯಿಂದಾಗಿ ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ಗ್ಯಾಂಗ್‌ವಾರ್ ಭೀತಿ ಶುರುವಾಗಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವೆ ಸುಮಾರು 10 ಎಕರೆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತೀವ್ರ ವಿವಾದವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ಈ ಸಂಬಂಧ ನ್ಯಾಯ ಪಂಚಾಯತಿ ಕೂಡ ಆಗಿತ್ತು. 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದ್ದು, ಅಟ್ಟಾಡಿಸಿ 6 ಮಂದಿಯನ್ನು ಕೊಲೆ ಮಾಡಲಾಗಿದೆ.

Share This Article
Leave a Comment