ಬಸ್ಸಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಉಮೇಶ್ ಬಂಧನ..!

Prakhara News
1 Min Read

ವಿಟ್ಲ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಠಾಣೆ ಪೊಲೀಸರು ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಅಪ್ರಾಪ್ತ ಬಾಲಕನು ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಅಪರಿಚಿತ ವ್ಯಕ್ತಿ (ಉಮೇಶ್) ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದ.

ಬಳಿಕ ಬಾಲಕ ತನ್ನ ಮನೆಗೆ ತೆರಳಿದಾಗ, ಆತನನ್ನು ಬೆನ್ನಟ್ಟಿಕೊಂಡು ಮನೆಗೆ ಬಂದ ಆರೋಪಿಯು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ, ಯಾರಿಗಾದರೂ ವಿಷಯ ತಿಳಿಸಿದರೆ ತೊಂದರೆ ಕೊಡುವುದಾಗಿ ಬೆದರಿಕೆಯೊಡ್ಡಿದ್ದ. ಈ ಸಂಬಂಧ ಬಾಲಕ ಹಾಗೂ ಆತನ ಕುಟುಂಬಸ್ಥರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 179/2026 ರಲ್ಲಿ ಪೋಕ್ಸೋ ಕಾಯ್ದೆ 2012 ರ ಕಲಂ 4(2) ಹಾಗೂ ಬಿಎನ್‌ಎಸ್ (BNS) 2023 ರ ಕಲಂ 351(2) ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ವಿಟ್ಲ ಠಾಣೆ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿ ಉಮೇಶ್‌ ನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಆದೇಶಿಸಿದೆ.

Share This Article
Leave a Comment