ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ…!!

Prakhara News
1 Min Read

ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಅಕ್ರಂ 193/2019 ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನ ವಿರುದ್ಧ ಕಲಂ 427, 504, 394, 341 ಐಪಿಸಿ ಹಾಗೂ 2(A) Prevention of Destruction and Loss of Property Act ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ತೆರಳಿದ್ದ ಆರೋಪಿ, ದಿನಾಂಕ 24/02/2026 ರಂದು ವಿದೇಶದಿಂದ ಮರಳುವ ವೇಳೆ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ವಿಟ್ಲ ಪೊಲೀಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ್ (HC 668) ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ (PC 2465) ಬಂಧಿಸಿದರು.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 07/03/2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದ ಮುಂದಿನ ತನಿಖೆಯನ್ನು ವಿಟ್ಲ ಪೊಲೀಸ್ ಠಾಣೆ ಮುಂದುವರಿಸುತ್ತಿದೆ.

Share This Article
Leave a Comment